BIG NEWS | ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ‘ಆಪರೇಷನ್ ಅಜಯ್’ ಘೋಷಿಸಿದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ ತೀವ್ರವಾಗುತ್ತಿದ್ದಂತೆ, ಇಸ್ರೇಲ್ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರಕಾರ ಸಕಲ ಸಿದ್ಧತೆ ನಡೆಸುತ್ತಿದ್ದು, ಇದೀಗ ಇಸ್ರೇಲ್ನಿಂದ ಹಿಂದಿರುಗಲು ಬಯಸುವ ಭಾರತೀಯರಿಗೆ ಮರಳಲು ಅನುಕೂಲವಾಗುವಂತೆ ‘ಆಪರೇಷನ್ ಅಜಯ್ ‘ಅನ್ನು ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದೆ.

ಇಸ್ರೇಲ್‌ನಲ್ಲಿ 18,000 ಅಧಿಕ ಭಾರತೀಯ ಪ್ರಜೆಗಳಲ್ಲಿ ವಾಸಿಸುತ್ತಿದ್ದು, ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದ್ರೆ ದೇಶದ ಜನರ ಸುರಕ್ಷತೆಗಾಗಿ ಕೇಂದ್ರ ಸರಕಾರ ‘ಆಪರೇಷನ್ ಅಜಯ್ ‘ಅನ್ನು ಘೋಷಿಸಿದೆ.

ಈ ಕುರರಿತು ಮಾಹಿತಿ ನೀಡಿದ ಕೇಂದ್ರ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ , ‘ಇಸ್ರೇಲ್ನಿಂದ ಹಿಂದಿರುಗಲು ಬಯಸುವ ನಮ್ಮ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗುತ್ತಿದೆ. ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇತರ ವ್ಯವಸ್ಥೆಗಳನ್ನು ಇರಿಸಲಾಗುತ್ತಿದೆ. ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!