ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಡಿ. ರೂಪಾ ಮೌದ್ಗಿಲ್ (D Roopa moudgil) ನಡುವಿನ ಆರೋಪ-ಪ್ರತ್ಯಾರೋಪ ಪ್ರಕರಣವನ್ನು ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.
ಕಳೆದ ಒಂದು ವಾರದಿಂದ ಐಎಎಸ್ ಅಧಿಕಾರಿ ಮತ್ತು ಡಿಐಜಿ ರೂಪ ನಡುವಿನ ವಾಕ್ಸಮರ ಜೋರಾಗಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಬ್ಬರ ವಿರುದ್ದ ತನಿಖೆ ನಡೆಸಲು ಆದೇಶ ಹೊರಡಿಸಿದೆ.
ಸಿವಿಲ್ ಸೇವಾ ನಿಯಮಾವಳಿ ಉಲ್ಲಂಘನೆ, ಭ್ರಷ್ಟಾಚಾರ ಹಾಗೂ ವೈಯಕ್ತಿಕ ವಿಚಾರಗಳಲ್ಲಿ ಆರೋಪ, ಪ್ರತ್ಯಾರೋಪ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ದ ತನಿಖೆ ನಡೆಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಆದೇಶವನ್ನು ಹೊರಡಿಸಿದ್ದಾರೆ.