BIG NEWS | ಹಿಂದೂ ಪದದ ಅರ್ಥ ಅಸಭ್ಯ: ವಿವಾದದ ಕಿಡಿ ಹೊತ್ತಿಸಿದ ಸತೀಶ್ ಜಾರಕಿಹೊಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದೂ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.

ಹಿಂದೂ ಎಂಬ ಶಬ್ದ ಪರ್ಷಿಯನ್ ಭಾಷೆಗೆ ಸೇರಿದ್ದು, ಅದನ್ನು ಎಲ್ಲಿಂದಲೋ ತೆಗೆದುಕೊಂಡು ಬಂದು ನಮ್ಮ ಮೇಲೆ ಹೇರುತ್ತಿದ್ದಾರೆ . ಈ ಕುರಿತು ಚರ್ಚೆ ನಡೆಯಲಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಸಮಾರಂಭ ಒಂದರಲ್ಲಿ ಮಾತನಾಡುವ ವೇಳೆ ಈ ವಿಷಯ ತಿಳಿಸಿದ ಅವರು, ಹಿಂದೂ ಶಬ್ದದ ಅರ್ಥ ಕೇಳಿದರೆ ನಿಮಗೆ ನಾಚಿಕೆಯಾಗುತ್ತದೆ. ಅದು ಅಶ್ಲೀಲ ಪದ ಎಂದು ಹೇಳಿದರು.

ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದಾರೆ.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!