BIG NEWS | ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಬೀಗ ಜಡಿದ ಇಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಜಾರಿ ನಿರ್ದೇಶನಾಲಯ ಸೀಲ್ ಮಾಡಿದೆ.
ಇದೇ ವೇಳೆ ಪೂರ್ವಾನುಮತಿಯಿಲ್ಲದೆ ಆವರಣವನ್ನು ತೆರೆಯಬಾರದು ಎಂದು ಖಡಕ್ ಸೂಚಿಸಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ, ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಸರಣಿ ವಿಚಾರಣೆಯನ್ನು ಇಡಿ ಅಧಿಕಾರಿಗಳು ನಡೆಸಿದ್ದರು.
ಈ ಬೆನ್ನಲ್ಲೇ ಇದೀಗ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೇ ತಮ್ಮ ಪೂರ್ವಾನುಮತಿ ಇಲ್ಲದೆ ಕಚೇರಿಯ ಆವರಣವನ್ನು ತೆರೆಯದಂತೆ ಖಡಕ್ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!