BIG NEWS | ಎಸಿಬಿ ರದ್ದುಗೊಳಿಸಿ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಸಿಬಿಯನ್ನು ರದ್ದುಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.

ಇಷ್ಟೇ ಅಲ್ಲ ಎಸಿಬಿಯಲ್ಲಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿದೆ. ಈ ಹಿಂದಿನಂತೆ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಎಸಿಬಿಯನ್ನು ರದ್ದುಗೊಳಿಸಿ ಹಿಂದಿನಂತೆ ಲೋಕಾಯುಕ್ತ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಈ ಕುರಿತು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಇದೀಗ ರಾಜ್ಯ ಸರ್ಕಾರಅಧಿಕೃತ ಆದೇಶ ಹೊರಡಿಸಿದೆ.

ಹೈಕೋರ್ಟ್ ಆದೇಶ ಸುಪ್ರೀಂನಲ್ಲಿ ಪ್ರಶ್ನೆ
ಭ್ರಷ್ಟಾಚಾರ ನಿಗ್ರಹ ಪಡೆ(ಎಸಿಬಿ) ರದ್ದುಪಡಿಸಿರುವ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸುವಂತೆ ಸುಪ್ರೀಂ ಕೋರ್ಚ್‌ ನೋಟಿಸ್‌ ನೀಡಿದೆ. ಜೊತೆಗೆ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!