ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಾರಿಗೆ ಮುಷ್ಕರ ಮುಂದೂಡಿಕೆ ಮಾಡಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ರಾಜ್ಯಾಧ್ಯಂತ ಈ ಕ್ಷಣದಿಂದಲೇ ಹೈಕೋರ್ಟ್ ಸೂಚನೆಯ ಮೇರೆಗೆ ನಾವು ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುವುದಾಗಿ ಘೋಷಿಸಿದರು.
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಗರಂ
ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲು ಮಾಡುವುದಾಗಿ ಹೈಕೋರ್ಟ್ ಸಿಜೆ ವಿಭು ಬಕ್ರು, ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ನ್ಯಾಯಪೀಠವು ಎಚ್ಚರಿಕೆ ನೀಡಿದೆ.
ಇಂದು ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ವಿಚಾರಣೆ ಸಮಯ ಕೋರ್ಟ್ ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.