ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಯಾಂಡಲ್ ವುಡ್ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ.
ನಿನ್ನೆಯಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಶರತ್ ಬಾಬು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಸ್ಯಾಂಡಲ್ ವುಡ್ ನಟ ಶರತ್ ಬಾಬು ಅವರು ಬಹು ಅಂಗಾಂಗ ಹಾನಿಯಿಂದ ಬಳಲುತ್ತಿದ್ದು, ಕಿಡ್ನಿ, ಲಂಗ್ಸ್, ಲಿವರ್ ಸೇರಿದಂತೆ ಮತ್ತಿತರೇ ಅಂಗಗಳು ತೊಂದರೆಗೆ ಒಳಗಾಗಿರುವುದಾಗಿ ತಿಳಿದು ಬಂದಿದೆ.
ಶ್ವಾಸಕೋಶ ಸಮಸ್ಯೆಯಿಂದಲೂ ಬಳಲುತ್ತಿರುವ ಅವರಿಗೆ ವೆಂಟಿಲೇಟರ್ ನಲ್ಲಿ ಹೈದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.