BIG NEWS | ಬಿಹಾರದಲ್ಲಿ ಹಿಂಸಾಚಾರ, ಮನೆಗಳಿಗೆ ಬೆಂಕಿ: ಸೆಕ್ಷನ್ 144 ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಮನವಮಿ ಹಬ್ಬದ ಸಮಯದಲ್ಲಿ ಬಿಹಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಇಲ್ಲಿನ ಸಸಾರಾಮ್‌ನಲ್ಲಿ ಸೆಕ್ಷನ್ 144 ಜಾರಿಗೊಳಿಸಿದೆ.

ಹಬ್ಬದಂದು ಜನರು ಕಲ್ಲು ತೂರಾಟ ನಡೆಸಿದ್ದು, ಹಲವು ವಾಹನಗಳಿಗೆ ಮತ್ತು ಮನೆಗಳಿಗೆ ಬೆಂಕಿ, ರಸ್ತೆಬದಿಯ ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ. ಘರ್ಷಣೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ್ದಾರೆ .

ಸಸಾರಂ ನಗರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಾಗ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ ಕೆಲವು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!