October 15, 2026
Thursday, October 15, 2026
spot_img

BIG NEWS | ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸಹಿತ 16 ಮಂದಿಗೆ ಜೀವಾವಧಿ ಶಿಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಹಿತ ಎಲ್ಲಾ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್​ ಕುಲಕರ್ಣಿ ದೋಷಿ ಎಂದು ಏಪ್ರಿಲ್​ 15ರಂದು ತೀರ್ಪು ಪ್ರಕಟಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಿದೆ.

ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ವಿನಯ್​ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದು, 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್​ಗೆ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್​ ವಿಧಿಸಿದೆ. ಜೊತೆಗೆ ಇ16 ಲಕ್ಷ ರೂ. ಪರಿಹಾರ ಹಣವನ್ನು ಹತ್ಯೆಯಾದ ಯೋಗೀಶ್​ ಗೌಡ ಅವರ ಮಕ್ಕಳಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮದೇ ಜಿಮ್‌ನಲ್ಲಿ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

Must Read