ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ನೇ ಬಾರಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶಿಸಿದೆ.
ಈ ಸಂಬಂಧ ಸಾರಿಗೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದರು. ಅಲ್ಲದೇ ಈವರೆಗೆ ಕೆಲವೇ ಕೆಲವು ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆ ಎಂದಿದೆ.
ಈ ಹಿನ್ನಲೆಯಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನವರಿ 31ರವರೆಗೆ ಅವದಿ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ.