ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಗೆ ಕೋರ್ಟ್ ಮತ್ತೊಂದು ಬಿಗ್ ರಿಲೀಫ್ ನೀಡಿದೆ. ಈ ಪ್ರಕರಣ ಸಂಬಂಧ ಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ.
ಪೊಲೀಸ್ ಠಾಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಅಲ್ಲದೇ ವಿದೇಶಿ ಪ್ರವಾಸ ಕೈಗೊಳ್ಳೋದಕ್ಕೂ ಅನುಮತಿ ನೀಡಿದೆ.
ಪ್ರತಿ ಭಾನುವಾರ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಅಲ್ಲು ಅರ್ಜುನ್ ಅವರ ಕಾನೂನು ತಂಡವು ವಿನಾಯಿತಿ ಕೋರಿದ ಬಳಿಕ ಅನುಮತಿ ಸಿಕ್ಕಿದ್ದು, ಜೊತೆಗೆ ವಿದೇಶ ಪ್ರವಾಸಕ್ಕೂ ಅನುಮತಿ ನೀಡಲಾಗಿದೆ.
‘ಪುಷ್ಪಾ 2’ ಚಿತ್ರದ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಕಾನೂನು ಸಮಸ್ಯೆ ಎದುರಿಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಟನನ್ನು ಡಿಸೆಂಬರ್ 13 ರಂದು ಬಂಧಿಸಲಾಯಿತು ಮತ್ತು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. 50,000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಅವರಿಗೆ 4 ವಾರಗಳ ಮಧ್ಯಂತರ ಜಾಮೀನು ನೀಡಲಾಯಿತು. ನಂತರ ಜನವರಿ 3 ರಂದು ಅಲ್ಲು ಅರ್ಜುನ್ ಗೆ ಈ ಪ್ರಕರಣದಲ್ಲಿ ನಿಯಮಿತ ಜಾಮೀನು ನೀಡಲಾಯಿತು.