ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಮಧ್ಯಂತರ ಜಾಮೀನು ಪಡೆದಿರುವ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠವು, ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶಿಸಿದೆ.
ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದಿಸಿದರೇ, ಎಸ್ ಪಿಪಿ ಪ್ರಸನ್ನ ಕುಮಾರ್ ಸರ್ಕಾರದ ಪರವಾಗಿ ಪ್ರಬಲ ವಾದವನ್ನು ಮಂಡಿಸಿದರು.
ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ ಕೋರ್ಟ್ ಆದೇಶ ನೀಡುವವರೆಗೂ ಮಧ್ಯಂತರ ಜಾಮೀನನ್ನು ವಿಸ್ತರಿಸಿ, ನಟ ದರ್ಶನ್ ಗೆ ಬಿಗ್ ರಿಲೀಫ್ ನೀಡಿದೆ.
ನಟ ದರ್ಶನ್ ಗೆ ಡಿಸೆಂಬರ್ 11 ರವರೆಗೆ ಮಧ್ಯಂತರ ಜಾಮೀನನ್ನು ಹೈಕೋರ್ಟ್ ನೀಡಿತ್ತು. ಅಂದೇ ಸರ್ಜರಿ ಮಾಡುತ್ತಿರುವುದಾಗಿ ಹೈಕೋರ್ಟ್ ಗೆ ಅವರ ಪರ ವಕೀಲ ಸಿ.ವಿ ನಾಗೇಶ್ ಮಾಹಿತಿ ನೀಡಿದ್ದರು. ಈ ಬಳಿಕ ಮಧ್ಯಂತರ ಆದೇಶವನ್ನು ಮುಂದಿನ ಜಾಮೀನು ಆದೇಶದ ತೀರ್ಪು ನೀಡುವವರೆಗೂ ವಿಸ್ತರಿಸಿ ಆದೇಶಿಸಿದೆ.