ನಟ ದರ್ಶನ್ ಗೆ ಬಿಗ್ ರಿಲೀಫ್: ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್​!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಹಿನ್ನೆಲೆ ನಿನ್ನೆ ಆರೋಪಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 16 ಮಂದಿ ಆರೋಪಿಗಳು ಮಂಗಳವಾರ ಸಿಸಿಎಚ್‌ 57ನೇ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು.

ಇತ್ತ ಇಂದು ನಟ ದರ್ಶನ್ ಜಾಮೀನು ಅರ್ಜಿ ರದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಯಮೂರ್ತಿ ಪರ್ದೀವಾಲ ಪೀಠದಿಂದ ಈ ಆದೇಶ ಹೊರಡಿಸಲಾಗಿದೆ. ಮೇ 26ರಿಂದ ಸುಪ್ರೀಂ ಕೋರ್ಟ್​ಗೆ ಬೇಸಿಗೆ ರಜೆ ಶುರುವಾಗಲಿದೆ. ಹೀಗಾಗಿ ಜುಲೈ 13ರ ತನಕ ಸುಪ್ರೀಂ ಕೋರ್ಟ್​ಗೆ ರಜೆ ಇರಲಿದೆ. ವಿಚಾರಣೆ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟ ಆಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!