ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುರಿತು ಅವಹೇಳನಕಾರಿ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕಲಬುರಗಿ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ.
ನ್ಯಾ.ರಾಜೇಂದ್ರ ಬಾದಾಮಿ ಅವರು ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿ ಬಲವಂತದ ಕ್ರಮವನ್ನು ಜರುಗಿಸಬಾರದು ಎಂದು ಸೂಚನೆ ನೀಡಿದ್ದಾರೆ. ದ್ದು,
ಮಲ್ಲಿಕಾರ್ಜುನ ಖರ್ಗೆ ಅವರು ದೂರು ನೀಡಿಲ್ಲ. ರಾಜಕೀಯ ವ್ಯಕ್ತಿ ದೂರು ನೀಡಿರುವುದು. ಜಾತಿನಿಂದನೆ ಮಾಡಿಲ್ಲ. ಜಾತಿನಿಂದನೆ ಹಾಕಲು ಸಾಧ್ಯವಿಲ್ಲ ಎಂದು ವಕೀಲ ಅರುಣ್ ಶಾಂ ವಾದ ಮಂಡಿಸಿದ್ದರು. ವಾದ ಆಲಿಸಿದ ಕೋರ್ಟ್ ಪ್ರಕರಣಕ್ಕೆ ತಡೆ ನೀಡಿದೆ.