ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಬಿಗ್ ರಿಲೀಫ್: ಮಾನನಷ್ಟ ಮೊಕದ್ದಮೆಯ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಲಿಂಗಾಯಿತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಕೋರ್ಟ್ ನಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ಅರ್ಜಿಯನ್ನು ಇಂದು ವಜಾಗೊಂಡಿದ್ದು, ಈ ಮೂಲಕ ಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಶಂಕರ್ ಶೇಟ್ ಎಂಬುವರು ಲಿಂಗಾಯತರ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬುದಾಗಿ ಆರೋಪಿಸಿ, ಮಾನನಷ್ಟ ಮೊಕದ್ದಮೆ ಯ ಅರ್ಜಿಯನ್ನು ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅರ್ಜಿಯನ್ನು ವಜಾಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!