ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಹಿಂದೆ ಸಿಎಂ ಆಗಿದ್ದ ಸಂದರ್ಭ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬುದಾಗಿ ದಾಖಲಾಗಿದ್ದ ಖಾಸಗಿ ದೂರಿನ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದು, ಕೋರ್ಟ್ ಬಿ ರಿಪೋರ್ಟ್ ಅನ್ನು ಅಂಗೀಕರಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬುದಾಗಿ ಬಿಜೆಪಿಯ ಎನ್ ಆರ್ ರಮೇಶ್ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಸಿಎಂ ಸಿದ್ಧರಾಮಯ್ಯ ಅವರು ಕಿಕ್ ಬ್ಯಾಕ್ ಪಡೆದಿಲ್ಲ ಎಂಬುದಾಗಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಅಂಗೀಕರಿಸಿದೆ.