ಕಾಂಗ್ರೆಸ್’ಗೆ ಬಿಗ್ ರಿಲೀಫ್: ಟ್ವಿಟರ್ ಖಾತೆ ನಿಷೇಧ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ್ ಜೋಡೋ ಯಾತ್ರೆಯ ಸಂದರ್ಭ ಕೆಜಿಎಫ್-2 ಚಿತ್ರದ ಹಾಡನ್ನು ದುರ್ಬಳಕೆ ಮಾಡಿದ ಈ ಹಿನ್ನಲೆ ಕಾಂಗ್ರೆಸ್ ಟ್ವಿಟ್ಟರ್ ಖಾತೆಗೆ ನಿರ್ಬಂಧ ಹೇರಲಾಗಿತ್ತು . ಇದೀಗ ಈ ನಿರ್ಬಂಧವನ್ನು ಹೈಕೋರ್ಟ್ ತೆಗೆದುಹಾಕಿದೆ.

ಅನುಮತಿ ಉಲ್ಲಂಘನೆ ಪ್ರಕರಣದಲ್ಲಿ ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಹ್ಯಾಂಡಲ್ಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಬೆಂಗಳೂರು ನಗರ ಜಿಲ್ಲೆಯ ವಾಣಿಜ್ಯ ನ್ಯಾಯಾಲಯ ನೀಡಿದ್ದ ಆದೇಶ ವಿರುದ್ಧ ಕಾಂಗ್ರೆಸ್ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಈ ಕುರಿತಂತೆ ಕರ್ನಾಟಕ ಹೈಕೋರ್ಟ್ ನ್ಯಾಯಪೀಠವು ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ಟ್ವಿಟ್ಟರ್ ಖಾತೆಯ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!