ಹೊಸದಿಗಂತ ಡಿಜಿಟಲ್ ಡೆಸ್ಕ್;
ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಂಗಳವಾರದಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಬಿ.ನಾಗೇಂದ್ರಗೆ ಜಾಮೀನು ಮಂಜೂರು ಮಾಡಿದೆ.


