Saturday, December 9, 2023

Latest Posts

ಕ್ರಿಕೆಟರ್ ಮೊಹಮ್ಮದ್ ಶಮಿಗೆ ಬಿಗ್ ರಿಲೀಫ್: ಕೌಟುಂಬಿಕ ಹಿಂಸಾಚಾರದ ಪ್ರಕರಣದಲ್ಲಿ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿಗೆ (Mohammad Shami) ಬಿಗ್ ರಿಲೀಫ್ ಸಿಕ್ಕಿದೆ.

ಕೌಟುಂಬಿಕ ಹಿಂಸಾಚಾರದ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಮೊಹಮ್ಮದ್ ಶಮಿ, ಅವರ ಸಹೋದರ ಮೊಹಮ್ಮದ್ ಹಾಸಿಮ್ ಹಾಗೂ ಕುಟುಂದ ಇತರ ಸದಸ್ಯರಿಗೆ ಮಂಗಳವಾರ ಕೋಲ್ಕತ್ತಾದ ಎಸಿಜೆಎಂ ನ್ಯಾಯಾಲಯ (Trial Court in Alipore) 2000 ರೂಪಾಯಿಯ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ.

2018 ರಲ್ಲಿ ಮೊಹಮ್ಮದ್ ಶಮಿ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್, ಜಾದವ್‌ಪುರ ಪೊಲೀಸ್ ಠಾಣೆಯಲ್ಲಿ ಶಮಿ, ಅವರ ಸಹೋದರ ಹಾಸಿಮ್ ಮತ್ತು ಆಕೆಯ ಅತ್ತೆಯ ವಿರುದ್ಧ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಶಮಿ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!