ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕರೊಬ್ಬರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅತಿಶಿ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನು ದೆಹಲಿ ನ್ಯಾಯಾಲಯ ಮಂಗಳವಾರ ರದ್ದುಗೊಳಿಸಿದೆ.
ಪ್ರವೀಣ್ ಶಂಕರ್ ಕಪೂರ್ ಅವರ ದೂರಿನ ಮೇರೆಗೆ ಸಮನ್ಸ್ ಜಾರಿಗೊಳಿಸಿದ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಆದೇಶದ ವಿರುದ್ಧ ಎಎಪಿ ನಾಯಕಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಈ ಆದೇಶ ನೀಡಿದ್ದಾರೆ.
ಆಪಾದಿತ ಮಾನಹಾನಿಕರ ಹೇಳಿಕೆಯು ಬಿಜೆಪಿಯ ವಿರುದ್ಧವೇ ಹೊರತು ಯಾವುದೇ ವ್ಯಕ್ತಿಯನ್ನು ಗುರಿಯಾಗಿಸಿಲ್ಲ. ಹೀಗಾಗಿ ಕಪೂರ್ ಅವರಿಗೆ ಮಾನಹಾನಿಯಾಗಿಲ್ಲ ಎಂಬ ಅತಿಶಿ ಪರ ವಕೀಲರ ವಾದವನ್ನು ನ್ಯಾಯಾಧೀಶರು ಗಮನಿಸಿದರು.