ಡಿಕೆಶಿ​​ಗೆ ಬಿಗ್ ರಿಲೀಫ್: ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು, ‘ಸುಪ್ರೀಂ’ ಮಹತ್ವದ ಆದೇಶ 

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಕೇಸ್ ವಾಪಸ್ ಪಡೆದಿದೆ.

2018 ರಲ್ಲಿ, ಜಾರಿ ನಿರ್ದೇಶನಾಲಯ ಡಿಕೆ ವಿರುದ್ಧ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪವನ್ನು ದಾಖಲಿಸಿತ್ತು. ಈ ಅಪರಾಧಗಳು ಆದಾಯ ತೆರಿಗೆ ಕಾಯ್ದೆಯ ನಿಬಂಧನೆಗಳಿಗೆ ಒಳಪಟ್ಟಿಲ್ಲ ಎಂದು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ಕರ್ನಾಟಕ ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದೆ. ಪಿಎಂಎಲ್ ಕಾನೂನಿನ ಅಡಿಯಲ್ಲಿ ಎಲ್ಲಾ ಕ್ರಮಗಳನ್ನು ರದ್ದುಗೊಳಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!