ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.
ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ವಹಿಸಿ ಅನುಮತಿ ನೀಡಲಾಗಿತ್ತು. ಆದರೇ ಹಾಲಿ ಕಾಂಗ್ರೆಸ್ ಸರ್ಕಾರವು ಇದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಇಂದು ರಾಜ್ಯ ಸರ್ಕಾರ ಹಾಗೂ ಸಿಬಿಐ ನಡುವಿನ ವಿಚಾರವಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಸೂಕ್ತವೆಂದು ತಿಳಿಸುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ.