ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫೇಕನ್ ಅಕ್ರಮ ಸಂಬಂಧ ಡಿಸೆಂಬರ್ 19, 2015ರಲ್ಲಿ ಲೋಕಾಯುಕ್ತ ಪೊಲೀಸರಿಂದ ದಾಖಲಾಗಿದ್ದ ಪ್ರಕರಣದ ರದ್ದು ಕೋರಿ ಸಲ್ಲಿಸಿದ್ತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.
ಈ ಹಿಂದೆ ಸಿಎಜಿ ವರದಿ ಆಧರಿಸಿ 15 ಕೇಸ್ ಗಳನ್ನು ರದ್ದುಪಡಿಸಲಾಗಿದೆ. ಹಿಂದಿನ ತೀರ್ಪು ಆಧರಿಸಿ ಡಿ.19, 2015ರ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ದಾಖಲಿಸಿದ್ದ ದೂರು ದಾಖಲಿಸಿದ್ದರು.