ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಲು ಎಸ್‌ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ (Pen Drive) ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಎಸ್‌ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.