ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್: 14 ವರ್ಷಗಳ ಜೈಲು ಶಿಕ್ಷೆಗೆ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 14 ವರ್ಷಗಳ ಜೈಲು ಶಿಕ್ಷೆಗೆ ಕೋರ್ಟ್ ತಡೆ ನೀಡಿದೆ.

ಸರ್ಕಾರಿ ಉಡುಗೊರೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿಗೆ ವಿಧಿಸಿದ್ದ ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ಅಮಾನತುಗೊಳಿಸಿದೆ .

ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಉತ್ತರದಾಯಿತ್ವ ನ್ಯಾಯಾಲಯವು 14 ವರ್ಷಗಳ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಇಮ್ರಾನ್ ಖಾನ್ ಕೋರ್ಟ್ ಮೊರೆ ಹೋಗಿದ್ದರು. ಅವರ ಶಿಕ್ಷೆಯನ್ನು ನ್ಯಾಯಾಲಯ ಅಮಾನತುಗೊಳಿಸಿದೆ .

ಶಿಕ್ಷೆಯ ವಿರುದ್ಧದ ಮೇಲ್ಮನವಿಯನ್ನು ಈದ್ ರಜಾದಿನಗಳ ನಂತರ ವಿಚಾರಣೆಗೆ ನಿಗದಿಪಡಿಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!