August 12, 2026
Wednesday, August 12, 2026
spot_img

ಮೇವು ಹಗರಣ | ಸುಪ್ರೀಂಕೋರ್ಟ್‌ನಲ್ಲಿ ಲಾಲೂಗೆ ಬಿಗ್‌ ರಿಲೀಫ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರೀಯ ತನಿಖಾ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಜಾರ್ಖಂಡ್ ಹೈಕೋರ್ಟ್ ಮೇವು ಹಗರಣದಲ್ಲಿ ಲಾಲೂ ಅವರ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಮೆಟ್ಟಿಲೇರಿತ್ತು.

ವಿಚಾರಣೆ ನಡೆಸಿದ ಪೀಠ, ಜಾಮೀನು ನೀಡಿ ಈಗಾಗಲೇ ಹಲವು ವರ್ಷಗಳು ಕಳೆದಿರುವುದರಿಂದ ಈಗಿರುವ ವ್ಯವಸ್ಥೆಯನ್ನು ಬದಲಾಯಿಸಲು ನಾವು ಸಿದ್ಧರಿಲ್ಲ ಎಂದು ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !