ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಸ್ವಕ್ಷೇತ್ರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್!

ಹೊಸದಿಗಂತ ವರದಿ ಧಾರವಾಡ: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯದಿಂದ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದ್ದು, ಸುದೀರ್ಘ ಕಾಯುವಿಕೆಯ ನಂತರ ಕೊನೆಗೂ ತಮ್ಮ ಸ್ವಕ್ಷೇತ್ರ ಧಾರವಾಡಕ್ಕೆ ಪ್ರವೇಶಿಸಲು ಕಾನೂನು ಅಡೆತಡೆಗಳು ನಿವಾರಣೆಯಾಗಿವೆ. ಸಾಕ್ಷ್ಯ ನಾಶ ಯತ್ನ ಪ್ರಕರಣದಲ್ಲಿ ವಿಧಿಸಲಾಗಿದ್ದ ಧಾರವಾಡ ಪ್ರವೇಶದ ನಿರ್ಬಂಧದ ಷರತ್ತುಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ, ಹಲವು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಕಾಲಿಡಲಾಗದೆ ದೂರ ಉಳಿದಿದ್ದ ಶಾಸಕರಿಗೆ ಮತ್ತು ಅವರ ಬೆಂಬಲಿಗರಿಗೆ ಆನೆಬಲ ಬಂದಂತಾಗಿದೆ. … Continue reading ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಸ್ವಕ್ಷೇತ್ರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್!