ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಕ್ಕರೆ ಕಾರ್ಖಾನೆ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಬಿಜೆಪಿ ಶಾಸಕ ಯತ್ನಾಳ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರ ನಮ್ಮ ಸಿದ್ದಸಿರಿ ಸಕ್ಕರೆ ಹಾಗು ಎಥನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗು ಮುಚ್ಚುವ ಷಡ್ಯಂತ್ರಕ್ಕೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ’ ಎಂದು ಹೇಳಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಸಿದ್ಧ ಶ್ರೀ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬಿಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.ಇದೀಗ ಮಂಡಳಿ ಆದೇಶಕ್ಕೆ ಕೋರ್ಟ್ ತಡೆ ನೀಡಿದೆ.