April 11, 2026
Saturday, April 11, 2026
spot_img

ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್ :

ವಿಜಯಪು ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ಚುನಾವಣೆಯಲ್ಲಿ ಯತ್ನಾಳ್ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಹಮೀದ್ ಮುಶ್ರೀಫ್ ಎಲೆಕ್ಷನ್ ಪಿಟಿಷನ್ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕಲಬುರ್ಗಿ ಹೈಕೋರ್ಟ್ ಪೀಠವು, ಕಳೆದ 2025ರ ಜುಲೈ 18 ರಂದೇ ಅರ್ಜಿಯನ್ನು ವಜಾಗೊಳಿಸಿ ಹಮೀದ್ ಅವರಿಗೆ ದಂಡ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಮೀದ್ ಮುಶ್ರೀಫ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ್ದು, ರಿವ್ಯೂ ಪಿಟಿಷನ್ ಅನ್ನೂ ವಜಾಗೊಳಿಸುವ ಮೂಲಕ ಕಾಂಗ್ರೆಸ್ ನಾಯಕನಿಗೆ ಹಿನ್ನಡೆಯಾಗಿದೆ.

ಇತ್ತ ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟ್ವಿಟರ್ (X) ನಲ್ಲಿ’ಸತ್ಯಮೇವ ಜಯತೆ’ ಎಂದು ಪೋಸ್ಟ್ ಮಾಡಿದ್ದಾರೆ. ಸತ್ಯವನ್ನು ಮರೆಮಾಚಲು ಯಾರಿಂದಲೂ ಸಾಧ್ಯವಿಲ್ಲ. ವಿಜಯಪುರದ ಜನತೆ ಸದಾ ನನ್ನೊಂದಿಗಿದ್ದಾರೆ ಎಂಬ ಅಚಲ ವಿಶ್ವಾಸ ನನಗಿದೆ ಎಂದು ಬರೆದುಕೊಂಡಿದ್ದಾರೆ. ಕಾನೂನು ಹೋರಾಟದ ಹೆಸರಿನಲ್ಲಿ ತನ್ನ ಇಮೇಜ್‌ಗೆ ಧಕ್ಕೆ ತರಲು ಯತ್ನಿಸಿದವರಿಗೆ ನ್ಯಾಯಾಲಯವೇ ತಕ್ಕ ಪಾಠ ಕಲಿಸಿದೆ ಎಂದು ಯತ್ನಾಳ್ ಗುಡುಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !