ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ನಟ ನಾಗಾರ್ಜುನ ಒಡೆತನದ ಮಾದಾಪುರದ ಎನ್ ಕನ್ವೆನ್ಷನ್ ಹಾಲ್ ನೆಲಸಮ ಮಾಡುವುದನ್ನು ಕೂಡಲೇ ನಿಲ್ಲಿಸುವಂತೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿದೆ.
ಈ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ. ವಿನೋದ್‌ಕುಮಾರ್ ಕಟ್ಟಡದ ನೆಲಸಮವನ್ನು ನಿಲ್ಲಿಸುವಂತೆ ತೆಲಂಗಾಣ ಸರ್ಕಾರಕ್ಕೆ ಸೂಚಿಸಿದೆ.
ಹೈದರಾಬಾದ್‌ನ ಮದಾಪುರದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್ ಕೆಲ ಭಾಗಗಳನ್ನು ಇಂದು (ಆ.24) ಹೈಡ್ರಾ (HYDRA) ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ವಿವಾದ ಕೋರ್ಟ್‌ನಲ್ಲಿದ್ರೂ ನೋಟಿಸ್ ನೀಡದೇ ತೆರವು ಮಾಡಲಾಗಿದೆ ಎಂದು ನಾಗಾರ್ಜುನ ಮತ್ತೆ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಕ್ಕಿನೇನಿ ನಾಗಾರ್ಜುನ ಅವರ ಎನ್ ಕನ್ವೆನ್ಷನ್ ಹಾಲ್ ಅನ್ನು ಇಂದು (ಆ.24) ನೆಲಸಮಗೊಳಿಸಲಾಗಿದೆ. ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಕ್ಕೆ ಹೈಡ್ರಾ (ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮೇಲ್ವಿಚಾರಣೆ ಮತ್ತು ರಕ್ಷಣೆ ಸಂಸ್ಥೆ) ಸಂಸ್ಥೆ ಶನಿವಾರ ಆಸ್ತಿಯನ್ನು ನೆಲಸಮಗೊಳಿಸಿದೆ.
ಆದರೆ ಈ ಜಮೀನಿನ ಕೆರೆ ಅಂಗಳಕ್ಕೆ ಬರುವುದಿಲ್ಲವೆಂದು ಮೂರ್ನಾಲ್ಕು ಸರ್ವೆ ವರದಿಗಳನ್ನು ನಾಗಾರ್ಜುನ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ತಮಗೆ ನಷ್ಟಪರಿಹಾರವಾಗಿ 9 ಕೋಟಿ ರೂ.ಗಳನ್ನು ಠೇವಣಿಯಾಗಿ ಪಾವತಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.