ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಆ ಮೂಲಕ ಇದೀಗ ನಳಿನ್ ಕುಮಾರ್ ಕಟೀಲುಗೆ ಬಿಗ್ ರಿಲೀಫ್ ನೀಡಲಾಗಿದೆ.
ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠವು ಜನಾಧಿಕಾರ ಸಂಘರ್ಷ ಪರಿಷತ್ತಿನ ಆದರ್ಶ ಅಯ್ಯರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ವಿಚಾರಣೆ ಮಾಡಿದ್ದು, ಅಸ್ಪಷ್ಟ ದೂರು, ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಮೇಲ್ಮನವಿಯನ್ನು ವಜಾಗೊಳಿಸಿದೆ.
ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಮುವತ್ತೇಳು ರೂಪಾಯಿ ಡಾಲರ್ ಗಿರಾಕಿ