ನೂಪುರ್​ ಶರ್ಮಾಗೆ ಸುಪ್ರೀಂನಿಂದ ಬಿಗ್​ ರಿಲೀಫ್: ಎಲ್ಲಾ ಕೇಸ್​ ಒಂದೆಡೆ ವಿಚಾರಣೆಗೆ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೂಪುರ್​ ಶರ್ಮಾ ವಿರುದ್ಧ ದೇಶದ ವಿವಿಧ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಎಲ್ಲಾ ಕೇಸ್​ಗಳನ್ನು ಒಂದೇ ಕಡೆ ನಡೆಸುವಂತೆ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ.

ದೇಶದ ಹಲವು ಭಾಗಗಳಲ್ಲಿ ಇವರ ವಿರುದ್ಧ ದೂರು ದಾಖಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ವಿವಿಧ ಕೋರ್ಟ್​ಗಳಲ್ಲಿ ವಿಚಾರಣೆ ನಡೆಯುತ್ತಿದೆ. ಎಲ್ಲೆಡೆ ತಾವು ಹೋಗುವುದು ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಒಂದೇ ಕಡೆ ನಡೆಸಲು ಅನುಮತಿ ನೀಡಬೇಕು ಎಂದು ನೂಪುರ್​ ಶರ್ಮಾ ಮಾಡಿಕೊಂಡ ಮನವಿಯನ್ನು ಕೋರ್ಟ್​ ಪುರಸ್ಕರಿಸಿದೆ.

ಇದೇ ವೇಳೆ ನೂಪುರ್ ಶರ್ಮಾ ಗೆ ಜೀವ ಬೆದರಿಕೆ ಬಂದಿರುವ ಅಂಶವನ್ನೂ ಪರಿಗಣಿಸಿರುವ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ಪೀಠ​, ಒಂದೇ ಕಡೆ ನಡೆಸಲು ಅನುಮತಿ ನೀಡಿದೆ. ಈ ಮೂಲಕ ನೂಪುರ್​ ನಿಟ್ಟುಸಿರು ಬಿಡುವಂತಾಗಿದೆ.

ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂ ರಾಜ್ಯಗಳಲ್ಲಿ ನೂಪುರ್​ ವಿರುದ್ಧ ಕೇಸ್​ ದಾಖಲಾಗಿದೆ. ಈ ಎಲ್ಲಾ ಕೇಸ್​ಗಳನ್ನು ದೆಹಲಿ ಒಂದಕ್ಕೇ ವರ್ಗಾವಣೆ ಮಾಡಿ ಅಲ್ಲಿಯೇ ವಿಚಾರಣೆ ನಡೆಸುವಂತೆ ಪೀಠ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!