Thursday, September 21, 2023

Latest Posts

ಪ್ರಜ್ವಲ್‌ ರೇವಣ್ಣಗೆ ಬಿಗ್ ರಿಲೀಫ್: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ 4 ವಾರಗಳವರೆಗೆ ತಾತ್ಕಾಲಿಕ ತಡೆಯನ್ನು ನೀಡಿದೆ.

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್‌ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ ಎಂದು ಸೋತ ಅಭ್ಯರ್ಥಿ ಎ. ಮಂಜು ದೂರು ದಾಖಲಿಸಿದ್ದರು. ಈ ಪ್ರಕರಣದ ಕುರಿತು ಸುಧೀರ್ಘ ವಿಚಾರಣೆ ಮಾಡಿದ ಕರ್ನಾಟಕ ಹೈಕೋರ್ಟ್‌ ಸೆಪ್ಟಂಬರ್‌ 1 ರಂದು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು.

ಇತ್ತ ಅಮಾನತು ಆದೇಶಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದರೂ, ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು.ಬಳಿಕ ಪ್ರಜ್ವಲ್‌ ರೇವಣ್ಣ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಈ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ನಿಂದ ಹೈಕೋರ್ಟ್‌ ಅಸಿಂಧುಗೊಳಿಸಿದ್ದ ಆದೇಶವನ್ನು 4 ವಾರಗಳವರೆಗೆ ತಾತ್ಕಾಲಿಕವಾಗಿ ತಡೆ ಹಿಡಿದಿದೆ.

ಆದರೆ, ಕೆಲವು ಷರತ್ತುಗಳನ್ನು ವಿಧಿಸಿದೆ. ಲೋಕಸಭೆಯಲ್ಲಿ ಅಧಿವೇಶನದಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಯಾವುದೇ ವೋಟಿಂಗ್ ಪವರ್ ಇರುವುದಿಲ್ಲ. ಸರ್ಕಾರದಿಂದ ಬರುವ ಭತ್ಯೆಗಳನ್ನ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪೀಠವು ಆದೇಶಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!