ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದನ್ನು ತಡೆಯುವ ಮಧ್ಯಂತರ ತಡೆ ಆದೇಶವನ್ನು ಹಿಂಪಡೆದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಎಎಪಿ ನಾಯಕ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ.
ದೆಹಲಿ ಹೈಕೋರ್ಟ್ ಇಂದು ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ್ದು, ರಾಘವ್ ಚಡ್ಡಾ ಗೆ ರಿಲೀಫ್ ಸಿಕ್ಕಿದೆ.
ಚಡ್ಡಾ ಅವರನ್ನು ಸರ್ಕಾರಿ ಬಂಗಲೆಯಿಂದ ತೆರವುಗೊಳಿಸದಂತೆ ರಾಜ್ಯಸಭಾ ಸಚಿವಾಲಯಕ್ಕೆ ನಿರ್ದೇಶನ ನೀಡಿದ್ದ ವಿಚಾರಣಾ ನ್ಯಾಯಾಲಯದ ಏಪ್ರಿಲ್ 18 ರ ಆದೇಶವು ಪುನಶ್ಚೇತನಗೊಂಡಿದೆ ಎಂದು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಭಾನಿ ಹೇಳಿದರು. ರಾಘವ್ ಚಡ್ಡಾ ಅವರು ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿಸದಂತೆ ರಾಜ್ಯಸಭಾ ಸಚಿವಾಲಯಕ್ಕೆ ಸೂಚಿಸಿದ್ದ ಮಧ್ಯಂತರ ಆದೇಶವನ್ನು ವಿಚಾರಣಾ ನ್ಯಾಯಾಲಯವು ಹಿಂಪಡೆದಿತ್ತು. ಅಕ್ಟೋಬರ್ 5ರ ಆದೇಶವನ್ನು ಪ್ರಶ್ನಿಸಿ ಚಡ್ಡಾ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.