ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌: 30 ದಿನಗಳ ಜಾಮೀನು ಮಂಜೂರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಜೈಲು ಶಿಕ್ಷೆ ಆದೇಶ ಬೆನ್ನಲ್ಲೇ ಬಿಗ್‌ ರಿಲೀಫ್‌ ಸಿಕ್ಕಿದ್ದು ಸೂರತ್‌ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಕೋರ್ಟ್‌ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.ಇದರ ಬೆನ್ನಲ್ಲೇ ರಾಹುಲ್‌ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್‌ ಕೋರ್ಟ್‌ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್‌ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!