April 18, 2026
Saturday, April 18, 2026
spot_img

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿ ವಿರುದ್ಧ ಅಪಪ್ರಚಾರದ ಪ್ರಕರಣವನ್ನು ಮಂಗಳವಾರ ರದ್ದುಗೊಳಿಸಿದೆ.

2023ರ ವಿಧಾನಸಭಾ ಚುನಾವಣೆಯ ವೇಳೆ ಪ್ರಮುಖ ದಿನಪತ್ರಿಕೆಗಳಲ್ಲಿ “ಭ್ರಷ್ಟಾಚಾರ ರೇಟ್ ಕಾರ್ಡ್” ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ, ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.

ಈ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್,ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !