ಸವಾರರಿಗೆ ಬಿಗ್‌ ರಿಲೀಫ್‌: ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಟ್ಯಾಕ್ಸಿ ಸಂಸ್ಥೆಗಳಿಗೆ ನೀಡಿದ್ದ ಗಡುವನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಆರು ವಾರಗಳವರೆಗೆ ವಿಸ್ತರಿಸಿದೆ.

ಸಮಯ ವಿಸ್ತರಣೆ ಕೋರಿ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ಜ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಏಪ್ರಿಲ್ 2 ರಂದು, ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಹೈಕೋರ್ಟ್ ಆರು ವಾರಗಳ ಕಾಲಾವಕಾಶ ನೀಡಿತ್ತು.

ಆರು ವಾರಗಳ ನಂತರ, ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಎಂದು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೂ ಸೂಚನೆ ನೀಡಿತ್ತು.

ವಾದ -ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ‘ರಾಜ್ಯ ಸರಕಾರ ಬೈಕ್‌ ಟ್ಯಾಕ್ಸಿಗಳಿಗೆ ಯಾವುದೇ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. 1988ರ ಮೋಟಾರು ವಾಹನ ಕಾಯಿದೆಯ ಸೆಕ್ಷನ್‌ 3ರಡಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹೀಗಾಗಿ, ಆರು ವಾರಗಳ ಒಳಗೆ ಎಲ್ಲಾ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ನೀಡಲಾದ ಸಮಯವನ್ನು ವಿಸ್ತರಿಸುವಂತೆ ಕೋರಿ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದರು. ಆದರೆ ವಾದ ವಿವಾದದ ನಂತರ ಕಾಲಾವಕಾಶವನ್ನು ವಿಸ್ತರಣೆ ಮಾಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!