ಸಿದ್ದರಾಮಯ್ಯಗೆ ಬಿಗ್‌ ರಿಲೀಫ್: ಸಿಎಂ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ರ ವಿಧಾನ ಸಭಾ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಜಯ ಸಾಧಿಸಿದ್ದು, ಅವರ ಈ ವಿಜಯವನ್ನು ಅಸಿಂಧು ಎಂದು ಪರಿಗಣಿಸಬೇಕು ಎಂಬ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಲಾಗಿತ್ತು.

ಇದೀಗ ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿ ಸೋಮಣ್ಣ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಜನರನ್ನ ತನ್ನತ್ತ ಸೆಳೆಯಲು ಪ್ರಯತ್ನ ಮಾಡಿತ್ತು. ಈ ರೀತಿಯ ಗ್ಯಾರಂಟಿ ಕಾರ್ಡ್‌‌ಗಳನ್ನು ನೀಡಿ ಜನರಿಗೆ ಆಮಿಷ ಒಡ್ಡಲಾಗಿದೆ. ಆದ್ದರಿಂದ ಸಿದ್ದರಾಮಯ್ಯನವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಬೇಕೆಂದು ಮೈಸೂರಿನ ಕೆಎಂ ಶಂಕರ ಎಂಬವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಲ್ಲದೇ ಈ ಅರ್ಜಿಗೆ ಸಿದ್ದರಾಮಯ್ಯ ಕೂಡಾ ಆಕ್ಷೇಪಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಈಗ ಈ ಅರ್ಜಿ ವಜಾಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!