April 12, 2026
Sunday, April 12, 2026
spot_img

ಸೋನಮ್ ವಾಂಗ್‌ಚುಕ್ ಗೆ ಬಿಗ್ ರಿಲೀಫ್: ಜೋಧಪುರ ಜೈಲಿನಿಂದ ಬಿಡುಗಡೆಗೆ ಕೇಂದ್ರ ಸರಕಾರ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.

ಲೇಹ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸೋನಮ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಬಂಧಿಸಿ ರಾಜಸ್ಥಾನದ ಜೋಧ್‌ಪುರ ಜೈಲಿಗೆ ಕಳುಹಿಸಲಾಗಿತ್ತು.

ಇದೀಗ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಲಭ್ಯವಿರುವ ಅಧಿಕಾರವನ್ನು ಬಳಸಿಕೊಂಡು ಸೋನಮ್ ವಾಂಗ್‌ಚುಕ್ ಅವರನ್ನು ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲು ಸೂಚಿಸಿದೆ.

ಲಡಾಖ್‌ನಲ್ಲಿ ಶಾಂತಿ, ಸ್ಥಿರತೆ ಮತ್ತು ಪರಸ್ಪರ ನಂಬಿಕೆಯ ವಾತಾವರಣವನ್ನು ಬೆಳೆಸಲು ಸರ್ಕಾರ ಮುಂದಾಗಿದ್ದು, ಹೀಗಾಗಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಅಧಿಕಾರಗಳನ್ನು ಚಲಾಯಿಸುವ ಮೂಲಕ ತಕ್ಷಣದಿಂದ ಜಾರಿಗೆ ಬರುವಂತೆ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ರದ್ದುಗೊಳಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಇದಾದ ಬಳಿಕ ಸೋನಮ್ ವಾಂಗ್ಚುಕ್ ಅವರನ್ನು ಇಂದು ಮಧ್ಯಾಹ್ನ ಜೈಲಿನಿಂದ ಬಿಡುಗಡೆ ಮಾಡಲಾಯಿತು ಎಂದು ರತನಾಡ ಪೊಲೀಸ್ ಠಾಣೆಯ ಎಸ್‌ಎಚ್‌ಒ ದಿನೇಶ್ ಲಖವತ್ ಅವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !