ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂತು ನಗರದ ಜಿಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಕೇಸ್ ಸಂಬಂಧ ತೆಲುಗು ನಟಿ ಹೇಮಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರ ವಿರುದ್ಧ ಕೇಸ್ ದಾಖಲಾಗಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಬಳಿಕ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಈ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ತೆಲುಗು ನಟಿ ಹೇಮಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ನಟಿ ಹೇಮಾ ವಿರುದ್ಧದ ರೇವ್ ಪಾರ್ಟಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ತೆಲುಗು ನಟಿ ಹೇಮಾಗೆ ಬಿಗ್ ರಿಲೀಫ್ ನೀಡಿದೆ.