ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್’ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಪ್ರಕರಣ ಒಂದುರದ್ದಾಗಿದೆ. ಇನ್ನು ಎರಡು ಪ್ರಕರಣಗಳಲ್ಲಿ ತಡೆಯಾಜ್ಞೆ ಸಿಕ್ಕಿದೆ.
ಕೋವಿಡ್ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಮೇಕೆದಾಟು ನಡೆಸಿದ್ದ ಪಾದಯಾತ್ರೆಯಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಕಾರಣಕ್ಕೆ ಡಿ.ಕೆ ಶಿವಕುಮಾರ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅದ್ರಂತೆ, ಈ ಪ್ರಕರಣ ರದ್ದು ಕೋರಿ ಹೈಕೋರ್ಟ್‍ಗೆ ಡಿ.ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಸಧ್ಯ ಹೈಕೋರ್ಟ್ ಈ ಪ್ರಕರಣವನ್ನ ರದ್ದುಗೊಳಿಸಿದೆ. ಇದಲ್ಲದೇ ಇನ್ನು ಎರಡು ಪ್ರಕರಣಗಳಲ್ಲಿ ತಡೆಯಾಜ್ಞೆ ನೀಡಿದೆ.