ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ.
ಕನಕಪುರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಸಿದ್ದು, ನಾಮಪತ್ರದಲ್ಲಿ ಯಾವುದೇ ಲೋಪದೋಷ ಇಲ್ಲ, ಎಲ್ಲವೂ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ನಾಮಪತ್ರವನ್ನು ಮಾನ್ಯ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಡಿಕೆಶಿ ಆಸ್ತಿ ವಿವರ ಸಲ್ಲಿಸಿದ್ದಾರೆ. ಡಿಕೆಶಿ ಆಸ್ತಿ ವಿವರದ ಮಾಹಿತಿಯನ್ನು ಐಟಿ ಅಧಿಕಾರಿಗಳು ಕಲೆಹಾಕಿದ್ದಾರೆ. ಕಳೆದ ಐದು ವರ್ಷಗಳ ತೆರಿಗೆ ಪಾವತಿ ವಿವರವನ್ನೂ ಕಲೆ ಹಾಕಲಾಗಿದೆ. ಐಟಿ ಅಧಿಕಾರಿಗಳಿಗೆ ನೀಡಿದ ಮಾಹಿತಿ ಹಾಗೂ ನಾಮಪತ್ರ ಸಲ್ಲಿಕೆ ವೇಳೆ ನೀಡಿದ ಮಾಹಿತಿಯಲ್ಲಿ ವ್ಯತ್ಯಾಸ ಕಾಣುತ್ತಿದ್ದು, ಇದರಿಂದ ನಾಮಪತ್ರ ರಿಜೆಕ್ಟ್ ಆಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ನಾಮಪತ್ರ ರಿಜೆಕ್ಟ್ ಆಗುವ ಭೀತಿಯಲ್ಲಿದ್ದ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಾಮಪತ್ರ ಅಂಗೀಕಾರವಾಗಿದೆ.