ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಲೈಂಗಿಕ ಹಗರಣ ಸಂಬಂಧ ವಿಶೇಷ ತನಿಖಾ ದಳ ಶುಕ್ರವಾರ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದೆ.
ಗುರುವಾರ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೆ ಎಸ್‌ಐಟಿ ತಂಡ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.ಈ ಮೂಲಕ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದಿಂದ ಮುಕ್ತರಾಗಿದ್ದಾರೆ.
ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಲ್ಲೇಖಿಸಲಾಗಿದೆ.
ಕಳೆದ ವರ್ಷ ಮಾಜಿ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದರು. ಆರೋಪ ಕೇಳಿಬರುತ್ತಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. .