ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಂಗಿನಕಾಯಿ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಈ ಹಿಂದೆ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನಸಾಮಾನ್ಯರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಎಳನೀರು ಹೆಚ್ಚು ಮಾರಾಟವಾಗುತ್ತಿರುವ ಹಿನ್ನೆಲೆಯಲ್ಲಿ ತೆಂಗಿನಕಾಯಿ ಕಡಿಮೆಯಾಗಿದ್ದು, ಬೆಲೆ ಹೆಚ್ಚಾಗಿದೆ.
ತೆಂಗಿನಕಾಯಿಗೆ 20, 25, 30 ಇತ್ತು. ಈಗ 65, ರೂ.ವರೆಗೆ ಮಾರಾಟವಾಗುತ್ತಿದೆ. ಕೆ.ಜಿ.ಗೆ 32-33 ರೂ.ಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಇದೀಗ 60 ರೂ.ಗೆ ತಲುಪಿದೆ. ಇಳುವರಿ ಕಡಿಮೆಯಾಗಿರುವುದು ಮತ್ತು ಎಳನೀರಿಗೂ ಭಾರಿ ಪ್ರಮಾಣದಲ್ಲಿ ಕೊಯ್ದು ಮಾಡುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.