ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಾದಿದೆ ಬಿಗ್ ಶಾಕ್, ಸಮಾಜವಾದಿ ಪಕ್ಷಕ್ಕೆ ಭರ್ಜರಿ ಮುನ್ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗುತ್ತಿದ್ದಂತೆಯೇ ಆಘಾತಕ್ಕೆ ಒಳಗಾಗಿತ್ತು.

25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 32 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಕೂಟದ ಹನ್ನೆರಡಕ್ಕೂ ಹೆಚ್ಚು ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಸ್ಮೃತಿ ಇರಾನಿ, ಮನೇಕಾ ಗಾಂಧಿ ಸೇರಿದಂತೆ ಹಲವು ಬಿಜೆಪಿ ನಾಯಕರು ಸೋಲಿನ ರುಚಿ ಕಂಡಿದ್ದಾರೆ. ರಾಹುಲ್ ಗಾಂಧಿ, ಮೋದಿ, ಅಖಿಲೇಶ್ ಯಾದವ್, ಡಿಂಪಲ್ ಯಾದವ್ ಮುನ್ನಡೆ ಗಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!