ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಜನರಿಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಲು ಖಾಸಗಿ ಬಸ್ ಮಾಲೀಕರು ಸಿದ್ಧತೆ ನಡೆಸಿದ್ದಾರೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಟಿಕೆಟ್ ದರ ಹೆಚ್ಚಾಗಿರುವುದೇ ಪ್ರಯಾಣಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್ ಮಾಲೀಕರು ಕೂಡ ಟಿಕೆಟ್ ದರ ಏರಿಕೆ ಮಾಡ್ತೀವಿ ಎಂದಿರುವುದು ಪ್ರಯಾಣಿಕರಿಗೆ ಮತ್ತಷ್ಟು ತಲೆಬಿಸಿಯಾಗಿದೆ.
ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಕ್ರಮ ಹಿಂಪಡೆಯದಿದ್ದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುತ್ತೇವೆ ಎಂದು ಮಾಲೀಕರು ಈಗಾಗಲೇ ತಿಳಿಸಿದ್ದಾರೆ. ಇನ್ನು ಬಸ್ ದರ ಶೇಕಡಾ 15 ರಿಂದ 20 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ.