ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನರ್ಹರ BPL ಕಾರ್ಡ್‌ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಪಿಎಲ್ ಮಾನದಂಡವನ್ನು ಪೂರೈಸದ ಕಾರ್ಡ್‌ಗಳನ್ನು ಮಾತ್ರ ಹಿಂತಿರುಗಿಸಲಾಗುವುದು. ಅಧಿಕೃತ ಕಾರ್ಡ್‌ಗಳಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಸೂಕ್ತವಲ್ಲದ ಕಾರ್ಡ್‌ಗಳನ್ನು ಹಿಂತಿರುಗಿಸಬಹುದು ಎಂಬುದು ನಮ್ಮ ಏಕೈಕ ಆಲೋಚನೆಯಾಗಿದೆ. ಈ ಬಗ್ಗೆ ಆಹಾರ ಪ್ರಾಧಿಕಾರ ಇನ್ನೂ ತನಿಖೆ ನಡೆಸುತ್ತಿದೆ. ಅಂತಿಮ ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ.
ಅರ್ಹರ ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಆರೋಪ ಸಾಬೀತಾಗಿಲ್ಲ. ಕೆಲವೊಮ್ಮೆ ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ ಆದರೆ ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ. ಇದೂ ಹಾಗೆಯೇ ಎಂದು ತಿಳಿಸಿದ್ದಾರೆ.