ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬ್ಯಾಂಕ್‌ಗಳ ಹಣವನ್ನು ಲೂಟಿ ಮಾಡಿ ಪರಾರಿಯಾಗಿದ್ದ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಶುಕ್ರವಾರ ಶಾಕ್ ನೀಡಿದೆ.
ವಿಜಯ್ ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿದ್ದ ಮುಂಬೈ ಕೋರ್ಟ್ , ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆನುಮತಿ ನೀಡಿತ್ತು. ಈ ಆದೇಶ ವಿರುದ್ಧ ಸುಪ್ರೀಂ ಕೋರ್ಟ್‌ನ ಕದ ತಟ್ಟಿದ್ದ ವಿಜಯ್ ಮಲ್ಯ ಗೆ ಇದೀಗ ಇಲ್ಲೂ ರಿಲೀಫ್ ಸಿಕ್ಕಿಲ್ಲ.
ವಿಜಯ್ ಮಲ್ಯ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದೂ, ಈ ಮೂಲಕ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ದಾರಿ ಸುಗಮವಾಗಿದೆ.
ಸುಪ್ರೀಂ ಕೋರ್ಟ್ ವಿಚಾರಣೆಯ ವೇಳೆ ಮಲ್ಯ ಪರ ವಕೀಲರನ್ನು ಹಲವು ವಿಚಾರದಲ್ಲಿ ಪ್ರಶ್ನೆ ಮಾಡಿತು. ಈ ವೇಳೆ ತಮ್ಮ ಕಕ್ಷಿದಾರ ಯಾವುದೇ ರೀತಿಯ ಸಂಪರ್ಕದಲ್ಲಿಲ್ಲ ಎಂದರು. ಇದರ ಬೆನ್ನಲ್ಲಿಯೇ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡುವ ತೀರ್ಮಾನ ಮಾಡಿತು. ಈ ವಿಚಾರದಲ್ಲಿ ಅರ್ಜಿದಾರರಿಂದ ಯಾವುದೇ ಸೂಚನೆಗಳನ್ನು ಪಡೆಯುತ್ತಿಲ್ಲ ಎಂದು ಮಲ್ಯ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು, ನಂತರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಅರ್ಜಿಯನ್ನು ವಜಾಗೊಳಿಸಿದೆ.