ಕಾಂಗ್ರೆಸ್ ಗೆ ಬಿಗ್ ಶಾಕ್: ವಿನಯ್‌ ಕುಲಕರ್ಣಿ ಧಾರವಾಡಕ್ಕೆ ಹೋಗುವಂತಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣೆಯ (Karnataka Election) ಸಮಯದಲ್ಲಿ ಧಾರವಾಡಕ್ಕೆ ತೆರಳಲು ಅನುಮತಿ ಕೋರಿ ಮಾಜಿ ಸಚಿವ ವಿನಯ್‌ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ (Yogesh Gowda Murder Case) ಸಂಬಂಧ ಧಾರವಾಡ ಪ್ರವೇಶಕ್ಕೆ (Dharwad Entry) ಅನುಮತಿ ಕೋರಿ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್‌ 15 ರಂದು ವಿನಯ್‌ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್‌ ಏಪ್ರಿಲ್‌ 18ಕ್ಕೆ ತೀರ್ಪು ಕಾಯ್ದಿರಿಸಿತ್ತು.

ಇದೀಗ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ವಜಾಗೊಳಿಸಿದೆ. ಧಾರವಾಡದಲ್ಲಿ ಯೋಗೀಶ್ ಗೌಡ ಹತ್ಯೆ ಪ್ರಕರಣದ 90 ಸಾಕ್ಷಿಗಳಿದ್ದಾರೆ. ವಿನಯ್ ಕಲಕರ್ಣಿಗೆ​ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಪ್ರಕರಣಕ್ಕೆ ಸಮಸ್ಯೆಯಾಗಬಹುದು. ಸೂಚಕರ ಮೂಲಕವೇ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ಕೋರ್ಟ್​ ಮುಂದೆ ಸಿಬಿಐ ಪರ ವಕೀಲ ವಾದ ಮಂಡಿಸಿದರು. ಇದನ್ನು ಆಲಿಸಿದ ನ್ಯಾಯಮೂರ್ತಿ ಬಿ. ಜಯಂತ ಕುಮಾರ್ ಕೋರ್ಟ್ , ವಿನಯ್ ಕುಲಕರ್ಣಿ ಮನವಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದರು. ಇದರಿಂದ ಮಾಜಿ ಸಚಿವ, ಧಾರವಾಡ ಕಾಂಗ್ರೆಸ್​ ಅಭ್ಯರ್ಥಿ ವಿನಯ್ ಕುಲಕರ್ಣಿ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಯಲ್ಲಿಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಟಿಕೆಟ್‌ ನೀಡಿತ್ತು. ವಿನಯ್‌ ಕುಲಕರ್ಣಿ ಈಗ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡದ ಕಾರಣ ಕಾಂಗ್ರೆಸ್‌ ಮುಂದೆ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!