ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂದಿನಿ ಹಾಲಿನ ದರ ಹೆಚ್ಚಳ ಹಾಗೂ ಮದರ್ ಡೈರಿ ಹಾಲಿನ ದರವನ್ನು 2 ರೂಪಾಯಿ ಹೆಚ್ಚಳ ಮಾಡಿದ ಬೆನ್ನಲ್ಲೇ ದೇಶದ ಮತ್ತೊಂದು ಜನಪ್ರಿಯ ಡೈರಿ ಬ್ರಾಂಡ್ ಅಮುಲ್ ಕೂಡ ಹಾಲಿನ ದರವನ್ನು ಏರಿಕೆ ಮಾಡಿದೆ.
ಹಾಲಿನ ದರ ಮೇ 1ರಂದು ಎರಡು ರೂಪಾಯಿ ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರುತ್ತಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ತಿಳಿಸಿದೆ. ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಎನ್ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಮತ್ತು ಅಮುಲ್ ಕೌ ಮಿಲ್ಕ್ಗಳಿಗೆ ದರ ಏರಿಕೆ ಅನ್ವಯವಾಗಲಿದೆ.